ಬಿ.ಎಸ್.ಎನ್.ಎಲ್ ಟವರ್ ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿ : ಸಂಸದ ಕೋಟ ಶ್ರೀನಿವಾಸಪೂಜಾರಿ

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿರುವ ಬಿ.ಎಸ್.ಎನ್.ಎಲ್ ಟವರ್‌ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡಲು ಬಿ.ಎಸ್.ಎನ್.ಎಲ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

    ಅವರು ಮಂಗಳವಾರ ನಗರದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನೆಟ್ವರ್ಕ್ ಹಾಗೂ ಟವರ್ ಸಮಸ್ಯೆ ಕುರಿತು ಬಿ.ಎಸ್.ಎನ್.ಎಲ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ಜಿಲ್ಲೆಯ ಗ್ರಾಮೀಣ ಭಾಗದ ಬಿ.ಎಸ್.ಎನ್.ಎಲ್ ಟವರ್‌ಗಳ ಸೇವೆ ಲಭ್ಯತೆ ಇದ್ದರೂ ಸಹ, ಪೂರ್ಣ ಪ್ರಮಾಣದಲ್ಲಿ ಅವುಗಳ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ಸಾರ್ವಜನಿಕ ದೂರುಗಳು ಕೇಳಿ ಬರುತ್ತಿವೆ. ಗ್ರಾಮೀಣ ಭಾಗದಲ್ಲಿರುವ ಬಿ.ಎಸ್.ಎನ್.ಎಲ್  ಟವರ್‌ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡುವುದರೊಂದಿಗೆ ನೆಟ್‌ವರ್ಕ್ಗಳ ಲಭ್ಯತೆಯಾಗಿ ಜನರು ಉಪಯೋಗಪಡಿಸಿಕೊಳ್ಳುವಂತೆ ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

    ಜಿಲ್ಲೆಯಲ್ಲಿ 196 ಬಿ.ಎಸ್.ಎನ್.ಎಲ್ ಟವರ್ ಗಳು ಕಾರ್ಯ ನಿರ್ವಹಿಸುತ್ತಿವೆ. 41 ಟವರ್‌ಗಳಿಗೆ 4 ಜಿ ಸಂಪರ್ಕ ನೀಡಲಾಗುತ್ತಿದೆ. 180 ಹೊಸ ಟವರ್‌ಗಳ ನಿರ್ಮಾಣಕ್ಕೆ ಈಗಾಗಲೇ ಬೇಡಿಕೆ ಇದ್ದು, 30 ಕ್ಕೆ ಅನುಮೋದನೆ ಸಿಕ್ಕಿದೆ. ಅವುಗಳ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಮಾಡಬೇಕು ಎಂದ ಅವರು, ಹಾಲಿ ಚಾಲ್ತಿಯಲ್ಲಿರುವ 196 ಟವರ್‌ಗಳ ಪೈಕಿ 75 ಟವರ್‌ಗಳಲ್ಲಿ ಬ್ಯಾಟರಿ ಸಮಸ್ಯೆಗಳಿವೆ. ಇವುಗಳಿಗೆ ಬ್ಯಾಟರಿಗಳ ಅಳವಡಿಕೆಯನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ತಿಳಿಸಿದರು.

    ನೆಟ್ವರ್ಕ್ ಟವರ್ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಸಂಬAಧಿಸಿದAತೆ ಇರುವ ಎಲ್ಲ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು. ನೆಟ್‌ವರ್ಕ್ ಸಮಸ್ಯೆ ಕುರಿತು ಜನರು ಕರೆ ಮಾಡಿದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು. ಬಿ.ಎಸ್.ಎನ್.ಎಲ್ ಸಂಪರ್ಕವನ್ನು ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಭಾಗದ ಎಲ್ಲಾ ಕಡೆಯಲ್ಲಿಯೂ ಕಲ್ಪಿಸಲು ಅಧಿಕಾರಿಗಳು ಸಹಕಾರ ನೀಡುವುದರ ಜೊತೆಗೆ ಮುಂದಿನ ದಿನಗಳಲ್ಲಿ ನೆಟ್ವರ್ಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿ ನಿರ್ಮಾಣವಾದ ಹೊಸ ಬಿ.ಎಸ್.ಎನ್.ಎಲ್ ಟವರ್‌ಗಳಿಗೆ ಆದಷ್ಟು ಶೀಘ್ರವಾಗಿ ಸಂಪರ್ಕವನ್ನು ಒದಗಿಸಲು ಮುಂದಾಗಬೇಕು. ಸರ್ವರ್‌ಗಳ ಸಾಮರ್ಥ್ಯ ಕಡಿಮೆ ಇರುವಲ್ಲಿ ಅದನ್ನು ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

    ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಮಾತನಾಡಿ, ಹೊಸದಾಗಿ ನೆಟ್ವರ್ಕ್ ಟವರ್‌ಗಳನ್ನು ಸ್ಥಾಪಿಸಲು ಸರ್ವೇ ನಡೆಸುವ ಸಂದರ್ಭದಲ್ಲಿ ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳು ಇರುವ ಪ್ರದೇಶಗಳಲ್ಲಿ ಸುರಕ್ಷಿತೆಯನ್ನು ಗುರುತಿಸಿ, ಅವರ ಚಟುವಟಿಕೆಗಳಿಗೆ ತೊಂದರೆಯಾಗದAತೆ ಟವರ್ ಸ್ಥಾಪನೆಗೆ ಮುಂದಾಗಬೇಕು ಎಂದರು.

    4ಜಿ ಅಪ್ ಗ್ರೇಡೆಷನ್ ಪ್ರಗತಿ ಹಾಗೂ ಗ್ರಾಮೀಣ ಭಾಗಗಳಲ್ಲಿ ನೆಟ್ವರ್ಕ್ ಸಮಸ್ಯೆಯ ನಿವಾರಣೆಗೆ ಇರುವ ಸವಾಲುಗಳು ಹಾಗೂ ಸಾಧ್ಯತೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

    ಸಭೆಯಲ್ಲಿ ಡಿ.ಎಫ್.ಓ ಗಣಪತಿ, ಬಿ.ಎಸ್.ಎನ್.ಎಲ್ ಅಧಿಕಾರಿಗಳಾದ ನವೀನ್ ಕುಮಾರ್ ಗುಪ್ತಾ, ಜನಾರ್ಧನ್, ಮಾಯಾದೇವಿ, ಗಪೂರ್, ಬಿಂದು ಪ್ರಕಾಶ್, ಕೃಷ್ಣಾ ನಾಯ್ಕ್, ಸಮಿತಿಯ ನಾಮ ನಿರ್ದೇಶಿತ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Post

Leave a Reply

Your email address will not be published. Required fields are marked *