
ಕುಂದಾಪುರ ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ‘ವಿ-ಗ್ರೋ’ ಬ್ಯುಸಿನೆಸ್ ಡೇ ಇದರ ಮೊದಲನೇ ಹಂತದ ವಿದ್ಯಾರ್ಥಿಗಳಿಂದ ವ್ಯವಹಾರ ಯೋಜನೆ ಪ್ರಸ್ತುತಿ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ವ್ಯವಹಾರ ಜ್ಞಾನವನ್ನು ಹೊಸ ಯೋಜನೆಗಳೊಂದಿಗೆ ಕ್ರಿಯಾ ಯೋಜನೆ ಪ್ರಸ್ತುತಪಡಿಸುವ ಮೂಲಕ ಕೌಶಲಾಭಿವೃದ್ಧಿಗೆ ಇದೊಂದು ಸೂಕ್ತ ವೇದಿಕೆಯಾಗಿದೆ ಎಂದರು.
ತೀರ್ಪುಗಾರರಾದ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ಶ್ರೀ ಸಂಜೀವ್ ಗುಂಡ್ಮಿ, ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ಶ್ರೀ ಆತ್ಮರಾಜ್ ಶೆಟ್ಟಿ, ಪ್ರಾಕ್ತನ ವಿದ್ಯಾರ್ಥಿ ಶ್ರೀ ಹೇಮಂತ್ ಶೆಣೈ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.
ಉಪ-ಪ್ರಾಂಶುಪಾಲ ಡಾ|ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿದರು. ಕಾರ್ಯಕ್ರಮದ ಸಂಯೋಜಕರಾದ ಸುಧೀರ್ ಕುಮಾರ್ ಸ್ವಾಗತಿಸಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್ ಪ್ರಸ್ತಾವಿಸಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಸತೀಶ್ ಶೆಟ್ಟಿ ಹೆಸ್ಕತ್ತೂರು ವಂದಿಸಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ದೀಪಾ ಪೂಜಾರಿ ನಿರೂಪಿಸಿದರು.