
ಬೇಲೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಸನ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬೇಲೂರು ಇವರುಗಳ ಸಂಯುಕ್ತಾಶ್ರಯದಲ್ಲಿ ರಸ್ತೆ ಸುರಕ್ಷತೆ ತರಬೇತಿ ಹಾಗೂ ಹದಿಹರೆಯ ಹೆಣ್ಣು ಮಕ್ಕಳಿಗೆ ಮಾನಸಿಕ ಆರೋಗ್ಯದ ಅರಿವು ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಬೆಳಗಿನ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಪನ್ಮೂಲ ವ್ಯಕ್ತಿಯಾದ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಎಸ್ ಎಸ್ ಪಾಷ ರವರು ಉದ್ಘಾಟಿಸಿ ಮಾತನಾಡಿ ವಾಹನ ಚಾಲನೆ ಹಾಗೂ ರಸ್ತೆ ಸುರಕ್ಷತೆ ನಿಯಮಗಳ ಬಗ್ಗೆ ಎರಡು ಗಂಟೆಗಳ ಕಾಲ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶಬ್ಬೀರ್ ಅಹ್ಮದ್ ಹಾಗೂ ತಾಲ್ಲೂಕು ಸಭಾಪತಿ ವೈ.ಎಸ್ ಸಿದ್ಧೇಗೌಡ ರವರು ಮಾತನಾಡಿ ರೆಡ್ ಕ್ರಾಸ್ ಸಂಸ್ಥೆಯ ಸಂಸ್ಥಾಪನೆಯ ಉದ್ದೇಶ ಹಾಗೂ ಕಾರ್ಯಾನುಕ್ರಮಗಳ ಬಗ್ಗೆ ಕಾರ್ಯಕ್ರಮದಲ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಯುವ ರೆಡ್ ಕ್ರಾಸ್ ಸಂಯೋಜಕರಾದ ಶ್ರೀ ಶರತ್ ಜೆ ರವರು ಪ್ರಾಸ್ತಾವಿಕ ನುಡಿಗಳನ್ನು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಯುತ ಗುರುಪ್ರಸಾದ್ ರವರು ವಹಿಸಿದ್ದರು.ಇದೇ ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಗಿರೀಶ್, ಭೀಮರಾಜ್ ರವರು ಉಪಸ್ಥಿತರಿದ್ದರು.
ಈ ಮಧ್ಯಾಹ್ನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಡಾ. ನಿರೂಪಮ ಕಿರಣ್ ರವರು ಮಾತನಾಡಿ ಹದಿಹರೆಯದ ಹೆಣ್ಣು ಮಕ್ಕಳ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುವ ಬಗ್ಗೆ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕಿ ಕೆ.ಟಿ ಜಯಶ್ರೀ ರವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರ ಸಮಾನತೆ,ಹಕ್ಕುಗಳು ಬಗ್ಗೆ ಹಾಗೂ ಯುವ ಜನತೆ ತಪ್ಪು ದಾರಿ ಹಿಡಿಯುತ್ತೀರುವ ಬಗ್ಗೆ, ತಂತ್ರಜ್ಞಾನ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.ಈ ಕಾರ್ಯಕ್ರಮದಲ್ಲಿ ನಿರ್ದೇಶಕಿ ಮಮತಾ ಪಾಟೀಲ್ ರವರು ಉಪಸ್ಥಿತರಿದ್ದರು.ನಿರೂಪಣೆ ತೇಜಸ್ವಿನಿ ಎಲ್.ಡಿ ಹಾಗೂ ವಂದನಾರ್ಪಣೆ ಶಿಲ್ಪಾ ಮಾಡಿದರು.