
ಕೋಟ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನುಕ್ಷಣವು ವಿದ್ಯಾರ್ಥಿಯು ತನ್ನನ್ನು ತಾನು ಬದಲಾಗುತ್ತಿರುವ ವಾತಾವರಣಕ್ಕೆ ಅನುಗುಣವಾಗಿ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಉದ್ಯೋಗ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬೇಕೆಂದು ಉಡುಪಿ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾAತ್ ಭಟ್ ವಿದ್ಯಾರ್ಥಿಗನ್ನುದ್ದೇಶಿಸಿ ಸಲಹೆ ನೀಡಿದರು.
ಅವರು ಇತ್ತೀಚಿಗೆ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು & ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ವಾಣಿಜ್ಯಶಾಸ್ತç ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಮಾತುಗಳ್ನನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ ಈ ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ. ಭಾಗವಹಿಸಿದರು. ವಾಣಿಜ್ಯ ಶಾಸ್ತç ವಿಭಾಗದ ಮುಖ್ಯಸ್ಥರಾದ ಡಾ. ಶೇಖರ ಬಿ. ಈ ಕಾರ್ಯಗಾರವನ್ನು ಸಂಯೋಜಿಸಿ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗನ್ನಾಡಿದರು. ಅಂತಿಮ ಬಿ.ಕಾಂ. ವಿದ್ಯಾರ್ಥಿ ಪ್ರತಿನಿಧಿಗಳಾದ ಓಂಕಾರ್ ಮತ್ತು ರಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ನವ್ಯಾ ಕಾರ್ಯಕ್ರಮವನ್ನು ನಿರೂಪಿಸಿ, ಕವನ ಮತ್ತು ತಂಡ ಪ್ರಾರ್ಥಿಸಿದರು.
ಇತ್ತೀಚಿಗೆ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು & ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ವಾಣಿಜ್ಯಶಾಸ್ತç ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಉಡುಪಿ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾAತ್ ಭಟ್ ಭಾಗವಹಿಸಿ ಈ ಮಾತುಗಳ್ನನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ., ವಾಣಿಜ್ಯ ಶಾಸ್ತç ವಿಭಾಗದ ಮುಖ್ಯಸ್ಥರಾದ ಡಾ. ಶೇಖರ ಬಿ., ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಇದ್ದರು.