
ದಿನಾಂಕ 28-2-2025ರಂದು ಭಾರತೀಯ ಚಾರ್ಟರ್ಡ್ ಎಕೌಂಟಂಟ್ ಸಂಸ್ಥೆಯ ಉಡುಪಿ ಶಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆಯ ವಾಣಿಜ್ಯಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ “ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ C.A ವಿಷ್ಷು ಆಚಾರ್ಯ ಇವರು ಹೂಡಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿಯನ್ನು ನೀಡಿದರು. ಸಿ.ಎ ಅಶ್ವಥ್ ಜೆ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್ ನಾಯಕ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಶಂಕರ ನಾಯ್ಕ್ ಬಿ ಉಪಸ್ಥಿತರಿದ್ದ್ರು ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರಾಮಚಂದ್ರ ಭಟ್ ವಂದಿಸಿದರು. ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದರು.